Lata Mangeshkar: ಗಾನ ಕೋಗಿಲೆ ಸಂಗೀತ ಸರಸ್ವತಿ ಲತಾ ಮಂಗೇಶ್ಕರ್ ಇನ್ನಿಲ್ಲ, 92ನೇ ವಯಸ್ಸಿಗೆ ಹಾಡು ನಿಲ್ಲಿಸಿದ ಗಾನಕೋಗಿಲೆ

ಜನವರಿ 11ರಂದು ಆಸ್ಪತ್ರೆಗೆ ದಾಖಲಾಗಿದ್ದ 92 ವರ್ಷದ ಭಾರತರತ್ನ ಪುರಸ್ಕೃತೆ ಲತಾ ಮಂಗೇಶ್ಕರ್ ಅವರು ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಬಳಿಕ ಅವರು ಚೇತರಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು.ಆದರೆ, ವಿಧಿಯಾಟವೇ ಬೇರೆಯಾಗಿತ್ತು.

ಭಾರತದ ನೈಟಿಂಗೇಲ್‌(Indian Nightingale) ಎಂದೇ ಪ್ರಸಿದ್ಧವಾಗಿರುವ ಲತಾ ಮಂಗೇಶ್ಕರ್‌(Lata Mangeshkar) ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾನಕೋಗಿಲೆ ಇಂದು ನಮ್ಮನ್ನೆಲ್ಲ ಬಿಟ್ಟು ಬಾರದ ಲೋಕಕ್ಕೆ ಹೊರಟು ಹೋಗಿದ್ದಾರೆ. ಅವರ ಸಾವಿನ ಸುದ್ದಿ ಕೇಳಿದ ಇಡೀ ಭಾರತವೇ ಕಣ್ಣೀರಿಡುತ್ತಿದ್ದಾರೆ. ತಮ್ಮ 13ನೇ ವಯಸ್ಸಿನಲ್ಲೇ ಹಾಡುವುದಕ್ಕೆ ಪ್ರಾರಂಭಿಸಿದ ಲತಾ ಮಂಗೇಶ್ಕರ್ ಇದುವರೆಗೂ ಹಿಂದಿ(Hindi) ಭಾಷೆಯೊಂದರಲ್ಲೇ 1000ಕ್ಕೂ ಅಧಿಕ ಹಾಡು(Songs)ಗಳನ್ನು ಹಾಡಿದ್ದಾರೆ. ಅಲ್ಲದೆ, ಭಾರತದ 36 ವಿವಿಧ ಭಾಷೆ(36 Different Language)ಗಳಲ್ಲಿ ಇವರು ಹಾಡಿದ್ದಾರೆ.ಕನ್ನಡದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರದ ‘ಬೆಳ್ಳನೆ ಬೆಳಗಾಯಿತು..’ ಹಾಡನ್ನು ಹಾಡಿ ಕನ್ನಡ ಚಿತ್ರರಂಗಕ್ಕೂ ಲತಾ ಪ್ರವೇಶ ಮಾಡಿದ್ದರು. ಇವರ ಗಾನಕ್ಕೆ ತಲೆದೂಗದವರೇ ಇಲ್ಲ. ಜನವರಿಯ ಆರಂಭದಲ್ಲಿ ಲತಾ ಮಂಗೇಶ್ಕರ್ ಅವರಿಗೆ ಕೊ ನಾ ಪಾಸಿಟಿವ್(Corona Positive) ಆಗಿತ್ತು. ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು

ಜನವರಿ 11ರಂದು ಆಸ್ಪತ್ರೆಗೆ ದಾಖಲಾಗಿದ್ದ 92 ವರ್ಷದ ಭಾರತರತ್ನ ಪುರಸ್ಕೃತೆ ಲತಾ ಮಂಗೇಶ್ಕರ್ ಅವರು ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಬಳಿಕ ಅವರು ಚೇತರಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು.ಆದರೆ, ವಿಧಿಯಾಟವೇ ಬೇರೆಯಾಗಿತ್ತು. ಲತಾ ಮಂಗೇಶ್ಕರ್ ಅವರ ಆರೋಗ್ಯ ಚೇತರಿಕೆಗಾಗಿ ಅವರ ಕುಟುಂಬಸ್ಥರು ದೇವರ ಮೊರೆ ಹೋಗಿದ್ದರು. ಮನೆಯಲ್ಲಿ ಪೂಜೆ, ಹೋಮ, ಹವನಗಳನ್ನು ನಡೆಸಿದ್ದರು. ಆದರೂ ಲತಾ ಮಂಗೇಶ್ಕರ್ ಅವರನ್ನು ಯಾರಿಂದಲೂ ಉಳಿಸಿಕೊಳ್ಳಲು ಆಗಲಿಲ್ಲ.

ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯ ವೈದ್ಯರು ಲತಾ ಮಂಗೇಶ್ಕರ್‌ಗೆ ಚಿಕಿತ್ಸೆ ನೀಡುತ್ತಿದ್ದಾರೆ. 36 ಭಾರತೀಯ ಭಾಷೆಗಳು, ವಿದೇಶಿ ಭಾಷೆಗಳಲ್ಲಿಯೂ ಲತಾ ಮಂಗೇಶ್ಕರ್ ಕೂಡ ಹಾಡಿದ್ದಾರೆ. ಅದರಲ್ಲೂ ಹಿಂದಿ, ಮರಾಠಿ ಭಾಷೆಯಲ್ಲಿಯೇ ಹೆಚ್ಚು ಹಾಡಿದ್ದಾರೆ. ಬಂಗಾಳಿಯಲ್ಲಿ 185 ಹಾಡು ಹಾಡಿದ್ದಾರೆ, ದಾದಾಸಾಹೇಬ್ ಫಾಲ್ಕೆ, ಭಾರತ ರತ್ನ, ರಾಷ್ಟ್ರ ಪ್ರಶಸ್ತಿ ಸೇರಿ ಸಾಕಷ್ಟು ಪ್ರಶಸ್ತಿಗಳನ್ನು ಲತಾ ಮಂಗೇಶ್ಕರ್ ಪಡೆದುಕೊಂಡಿದ್ದಾರೆ. ಲತಾ ಮಂಗೇಶ್ಕರ್ ಸಹೋದರಿಯರು ಕೂಡ ಗಾಯಕಿಯರು.1953ರಲ್ಲಿ ‘Vaadal’ ಮರಾಠಿ ಸಿನಿಮಾ, 1953ರಲ್ಲಿ ‘Jhaanjhar’ ಎಂಬ ಹಿಂದಿ ಸಿನಿಮಾ, 1955ರಲ್ಲಿ ‘Kanchan Ganga’ ಎಂಬ ಹಿಂದಿ ಸಿನಿಮಾ, 1990ರಲ್ಲಿ ‘Lekin’ ಸಿನಿಮಾ ನಿರ್ಮಾಣ ಮಾಡಿದ್ದಾರೆ.ನಿನ್ನೆ ತೀವ್ರ ಘಟಕದಲ್ಲಿ ಲತಾ ಮಂಗೇಶ್ಕರ್​ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೇ ನಮ್ಮನ್ನೆಲ್ಲ ಬಿಟ್ಟು ಬಾರದ ಲೋಕಕ್ಕೆ ತೆರಳಿದ್ದಾರೆ.

WhatsApp
Facebook
Telegram
error: Content is protected !!
Scroll to Top