Tuesday, August 9, 2022
Homeಶಿರಸಿಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ;ಬುದ್ದಿವಾದ ಹೇಳಿದ್ದೆ ತಪ್ಪಾಯ್ತು..!

ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ;ಬುದ್ದಿವಾದ ಹೇಳಿದ್ದೆ ತಪ್ಪಾಯ್ತು..!

ಉತ್ತರಕನ್ನಡ(ಶಿರಸಿ):ಇತ್ತಿಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿದೆ. ಅದರಲ್ಲೂ ವಿದ್ಯಾರ್ಥಿಗಳು ಸಣ್ಣಸಣ್ಣ ವಿಷಯವನ್ನೇ ಮನಸ್ಸಿಗೆ ಹಚ್ಚಿಕೊಂಡು ಸಾವಿಗೆ ಶರಣಾಗುತ್ತಿದ್ದಾರೆ. ಹೌದು, ಕಾಲೇಜು ವಿದ್ಯಾರ್ಥಿನಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಭೈರುಂಬೆ ಸಮೀಪದ ದೇವರಕೆರಿಯಲ್ಲಿ ನಡೆದಿದೆ. ಪೂಜಾ ನಾಗರಾಜ ನಾಯ್ಕ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

ಮನೆಯವರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ವಿದ್ಯಾರ್ಥಿನಿ ಪಿ.ಯು.ಸಿ. ಓದುತ್ತಿದ್ದಳು ಎಂದು ತಿಳಿದುಬಂದಿದ್ದು, ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!