ಅಪ್ಸರಕೊಂಡದಲ್ಲಿ ಗುಡ್ಡ ಕುಸಿಯುವ ಸ್ಥಳಕ್ಕೆ ಕೋಟಾ ಶ್ರೀನಿವಾಸ ಪೂಜಾರಿ ಬೇಟಿ ಪರಿಶೀಲನೆ

ಹೊನ್ನಾವರ : ತಾಲೂಕಿನ ಅಪ್ಸರಕೊಂಡದಲ್ಲಿ ಗುಡ್ಡ ಕುಸಿಯುವ ಸ್ಥಳಕ್ಕೆ ರವಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆಗಾಲದ ಸಂದರ್ಭದಲ್ಲಿ ಗುಡ್ಡವನ್ನು ತೆರುವುಗೊಳಿಸುವುದು ಇನ್ನೊಂದು ಅಪಾಯಕ್ಕೆ ದಾರಿಮಾಡಿಕೊಟ್ಟಂತೆ ಎಂಬ ಭಯವೂ ಇದ್ದು, ಈಗ ಕಣ್ಣಳತೆಯಲ್ಲಿ ಕಾಮಗಾರಿ ನಡೆಸುವುದು ಕಷ್ಟಸಾಧ್ಯ ಎಂಬ ಪರಿಸ್ಥಿತಿ ಇರುವುದರಿಂದ ಗುಡ್ಡ ತೆರುವಿನಿಂದ ಆಗಬಹುದಾದ ಪರಿಣಾಮಗಳ ಬಗ್ಗೆ ಮಾಹಿತಿ ಪಡೆದು ಸರ್ವೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಅಲ್ಲದೇ ಆ ಭಾಗದ ನಿವಾಸಿಗಳಿಗೆ ಯಾವುದೇ ರೀತಿಯಲ್ಲಿಯೂ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ರಾತ್ರಿಯೆ ಶಾಸಕ ಸುನೀಲ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರಿಗೆ ಧೈರ್ಯ ತುಂಬಿ, ಉಸ್ತುವಾರಿ ಸಚಿವರನ್ನು ಹಾಗೂ ಸಂಭಂದಿಸಿದ ತಾಲೂಕಿನ ಎಲ್ಲಾ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸುವ ಭರವಸೆ ನೀಡಿದ್ದರು. ಸಚಿವರಿಗೆ ಗುಡ್ಡ ಕುಸಿತದ ಸ್ಥಳ ಹಾಗೂ ಸುತ್ತಲಿನ ಮನೆ ಮತ್ತು ರೈತರ ಭೂಮಿಯಲ್ಲಿ ಬೆಳೆದ ಬೆಳೆಗಳ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ತಹಸೀಲ್ದಾರ್ ನಾಗರಾಜ್ ನಾಯ್ಕಡ್, ತಾ. ಪಂ. ಕಾರ್ಯನಿರ್ವಾಹಣಾಧಿಕಾರಿ ಸುರೇಶ ನಾಯ್ಕ, ಅರಣ್ಯ ಇಲಾಖೆಯ ಅಧಿಕಾರಿಗಳು, ಗಣಿ ಇಲಾಖೆಯ ಅಧಿಕಾರಿಗಳು,
ಗ್ರಾ. ಪಂ. ಸದಸ್ಯರು, ಸ್ಥಳೀಯ ಜನಪ್ರತಿನಿದಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು

WhatsApp
Facebook
Telegram
error: Content is protected !!
Scroll to Top