ಪ್ರಭಾತನಗರ ಶಾಲೆಯಲ್ಲಿ ಮೊಟ್ಟೆ ವಿತರಣೆ

ಹೊನ್ನಾವರ: ವಿದ್ಯಾರ್ಥಿಗಳು ಆರೋಗ್ಯದ ಜೊತೆಗೆ ಶಿಕ್ಷಣವನ್ನು ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಹೇಳಿದರು.


ಪಟ್ಟಣದ ಪ್ರಭಾತನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಶೇಂಗಾಚಿಕ್ಕಿ ಮತ್ತು ಬಾಳೆಹಣ್ಣು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಕ್ಕಳಲ್ಲಿ ಪೋಷಕಾಂಶಗಳನ್ನು ಹೆಚ್ಚಿಸಲು ಸರ್ಕಾರ ಬಿಸಿ ಊಟದ ಜೊತೆಗೆ ಮೊಟ್ಟೆಯನ್ನು ವಿತರಿಸುತ್ತಿದೆ. ಮೊಟ್ಟೆಯನ್ನು ಸೇವಿಸದ ವಿದ್ಯಾರ್ಥಿಗಳಿಗೆ ಶೇಂಗಾಚಿಕ್ಕಿ ಅಥವಾ ಬಾಳೆಹಣ್ಣುಗಳನ್ನು ನೀಡಲಾಗುತ್ತಿದೆ. ಈ ಯೋಜನೆಯನ್ನು ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿ ಸಮರ್ಪಕವಾಗಿ ಕಾರ್ಯರೂಪಕ್ಕೆ ತರಬೇಕು ಎಂದರು.
ಪ.ಪA.ಸದಸ್ಯ ಮೇಧಾ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಸರಿಯಾದ ಬೆಳವಣಿಗೆ ಹೊಂದಬೇಕು ಎಂಬ ಉದ್ದೇಶದಿಂದ ಸರ್ಕಾರ ಸೌಲಭ್ಯ ನೀಡುತ್ತಿದೆ. ಎಲ್ಲ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಎಸ್.ಡಿ.ಎA.ಸಿ ಅಧ್ಯಕ್ಷ ಮಾರುತಿ ನಾಯ್ಕ, ಸದಸ್ಯರಾದ ಮಂಜುನಾಥ ನಾಯ್ಕ, ಸಂತೋಷ ಪಾಲೇಕರ್, ಸುನೀತಾ ಮೇಸ್ತ, ಮಂಜುಳಾ ಮೇಸ್ತ, ಜ್ಯೋತಿ ನಾಯ್ಕ, ಶಗುಪ್ತ ಖುರೇಶ, ಮುಖ್ಯಾಧ್ಯಾಪಕಿ ವಿಜಯಾ ಶೇಟ್, ಶಿಕ್ಷಕರಾದ ಕಲ್ಪನಾ ಹೆಗಡೆ, ವಿಜಯಾ ಭಟ್, ಸುನೀತಾ ಮೇಸ್ತ, ರೋಹಿಣಿ ಗೌಡ, ಪೂಜಾ ನಾಯ್ಕ ಇತರರಿದ್ದರು

WhatsApp
Facebook
Telegram
error: Content is protected !!
Scroll to Top