ದಿ. ರಾಮಕೃಷ್ಣ ಹೆಗಡೆಯವರ 97ನೇ ಜನ್ಮದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ ವಿಚಾರ ಸಂಕಿರಣ ಹಾಗೂ ಸಂವಾದ ಕಾರ್ಯಕ್ರಮ: ಡಾ.‌ಶಶಿಭೂಷಣ ಹೆಗಡೆ

ಸಿದ್ದಾಪುರ: ಅಗಷ್ಟ 29 ರಂದು ಪಟ್ಟಣದ ಎಂಜಿಸಿ ಕಾಲೇಜಿನಲ್ಲಿ ದೇಶ ಕಂಡ ಮೌಲ್ಯಾಧಾರಿತ ರಾಜಕಾರಣಿ ಹಾಗೂ ಒಕ್ಕೂಟ ವ್ಯವಸ್ಥೆಯನ್ನು ಬಲವಾಗಿ ಪ್ರತಿಪಾದಿಸಿದ್ದ ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆಯವರ 97ನೇ ಜನ್ಮದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ ವಿಚಾರ ಸಂಕಿರಣ ಹಾಗೂ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರಾಮಕೃಷ್ಣ ಹೆಗಡೆ ಚಿರಂತನದ ಅಧ್ಯಕ್ಷ ಡಾ.‌ಶಶಿಭೂಷಣ ಹೆಗಡೆ ತಿಳಿಸಿದರು.


ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಎಂಜಿಸಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಹಾಗೂ ರಾಮಕೃಷ್ಣ ಹೆಗಡೆ ಚಿರಂತನದ ಸಹಯೋಗದಲ್ಲಿ ‘ ಹೆಗಡೆ ದೃಷ್ಟಿಕೋನದಲ್ಲಿ ಒಕ್ಕೂಟ ವ್ಯವಸ್ಥೆ ಮತ್ತು ಕೇಂದ್ರ-ರಾಜ್ಯಗಳ ಸಂಬಂಧಗಳು ‘ ವರ್ತಮಾನದಲ್ಲಿ ಮತ್ತು ಭವಿತವ್ಯದಲ್ಲಿ ಇದರ ಪ್ರಸ್ತುತತೆ ಕುರಿತು ಸೋಮವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಕಾಲೇಜಿನ ಧನ್ವಂತರಿ ಆಯುರ್ವೇದ ಮಹಾವಿದ್ಯಾಲಯದ ಸಭಾಭವನದಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮ ಸಂಘಟಿಸಲಾಗಿದೆ. ರಾಮಕೃಷ್ಣ ಹೆಗಡೆ ಒಕ್ಕೂಟ ವ್ಯವಸ್ಥೆ ಹಾಗೂ ಕೇಂದ್ರ ರಾಜ್ಯಗಳ ಸಂಬಂಧದ ಕುರಿತು ಪ್ರತಿಪಾದಿಸಿದ ಅಪರೂಪದ ರಾಜಕಾರಣಿಯಾಗಿದ್ದರು. ರಾಜ್ಯಗಳ ಸ್ವಾಯತತ್ತೆ ಬಗ್ಗೆ ಬಲವಾಗಿ ಪ್ರತಿಪಾದಿಸಿದ ಹೆಗಡೆ ಒಕ್ಕೂಟ ವ್ಯವಸ್ಥೆ ಬಗ್ಗೆ ಅಷ್ಟು ಬದ್ದತೆ ಇಟ್ಟುಕೊಂಡಿದ್ದರು. ವಿಕೇಂದ್ರಿಕರಣ ವ್ಯವಸ್ಥೆಯ ಗಂಗೋತ್ರಿಯಾಗಿರುವ ಪೆಡರಲ್ ಸಿಸ್ಟಮ್ ಬಗ್ಗೆ ಹೆಗಡೆಯವರಿಗೆ ಅತಿಯಾದ ವಿಶ್ವಾಸವಿತ್ತು. ಹೆಗಡೆಯವರ ಜನ್ಮದಿನ ಅರ್ಥಪೂರ್ಣವಾಗಿ ಆಚರಿಸಲು ರಾಜ್ಯಮಟ್ಟದ ಕಮ್ಮಟ ಆಯೋಜಿಸಿದ್ದು, ಸಾರ್ವಜನಿಕರಿಗೆ ಮುಕ್ತವಾದ ಆಹ್ವಾನವಿದೆ ಎಂದರು.
ರಾಮಕೃಷ್ಣ ಹೆಗಡೆ ಚಿರಂತನದ ಅಧ್ಯಕ್ಷ ಡಾ. ಶಶಿಭೂಷಣ ಹೆಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಂಗೂರನಗರ ಪಿಯು ಕಾಲೇಜಿನ ಪ್ರಾಚಾರ್ಯ ಡಾ. ಆರ್.ಜಿ.ಹೆಗಡೆ, ರಾಮಕೃಷ್ಣ ಹೆಗಡೆ ಚಿರಂತನದ ವಿಶ್ವಸ್ಥ ಆರ್.ಜಿ.ನಾಯ್ಕ ಕುಮಟಾ ಹಾಗೂ ಉದ್ಯಮಿ ಬಸವರಾಜ ಓಶಿಮಠ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಹೆಚ್ಚಿನ‌ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಕೋರಿದರು.
ಈ ವೇಳೆ ಪ್ರಾಚಾರ್ಯ ಎಸ್.ಎಸ್.ಗುತ್ತಿಕರ್, ಶಿಕ್ಷಣ ಪ್ರಸಾರಕ ಸಮಿತಿ ಕಾರ್ಯದರ್ಶಿ ಕೆ.ಐ.ಹೆಗಡೆ, ರಾಜ್ಯಶಾಸ್ತ್ರ ವಿಭಾಗದ ಬಸವಲಿಂಗಪ್ಪ ಉಪಸ್ಥಿತರಿದ್ದರು.

WhatsApp
Facebook
Telegram
error: Content is protected !!
Scroll to Top