ಹೊಸ ಶಿಕ್ಷಣ ನೀತಿಯ ಬಗ್ಗೆ ಶಿಕ್ಷಕರಿಗೆ ಜಾಗೃತಿ, ಅರಿವು ಇರಬೇಕು. ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ

ಸಿದ್ದಾಪುರ:- ಹೊಸ ಶಿಕ್ಷಣ ನೀತಿಯ ಬಗ್ಗೆ ಶಿಕ್ಷಕರಿಗೆ ಜಾಗೃತಿ, ಅರಿವು ಇರಬೇಕು. ಶಿಕ್ಷಕರು ಮಕ್ಕಳಿಗೆ ಮೌಲ್ಯ ಯುತ ಶಿಕ್ಷಣ ನೀಡಿದರೆ ಸಮೃದ್ಧ ರಾಷ್ಟ್ರ ಕಟ್ಟಲು ಸಾಧ್ಯ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು


ಅವರು ಸೋಮವಾರ ಪಟ್ಟಣದ ಶೃಂಗೇರಿ ಶಂಕರ ಮಠದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಹಾಗೂ ಗುರು ಗೌರವಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಅಂಕ ಕೊಡುತ್ತದೆ. ಉದ್ಯೋಗ ಕೊಡುತ್ತದೆ. ದೇಶ ಮೊದಲು ಎನ್ನುವ ಭಾವನೆ ಮಕ್ಕಳಲ್ಲಿ ಬರಬೇಕು. ಪರಿವರ್ತನೆ ಆಗಬೇಕಾದರೆ ನಮ್ಮಲ್ಲಿ ಸ್ವಯಂ ಶಿಸ್ತು ಬೆಳೆಯಬೇಕು. ಇಲ್ಲದಿದ್ದರೆ ಮುಂದಿನ ಜೀವನದಲ್ಲಿ ನಾವು ಅಪಾಯವನ್ನು ಎದುರಿಸಬೇಕಾಗುತ್ತದೆ. ಸರಕಾರದ ಯೋಜನೆಗಳು ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬರಬೇಕಾದರೆ ನಮ್ಮಲ್ಲಿ ಸ್ವಯಂ ಶಿಸ್ತು ಇರಬೇಕು.
ಶಾಲೆಗಳು ಸಮಾಜದಲ್ಲಿ ಒಳ್ಳೆಯ ಕೆಲಸಗಳನ್ನು ಹುಟ್ಟು ಹಾಕುವ ಪ್ರೇರಣೆಯ ಕೇಂದ್ರಗಳಾಗಬೇಕು. ಎಲ್ಲಾ ಇಲಾಖೆಗಳು ಹಾಗೂ ಸಮಾಜದಲ್ಲಿ ಸವಾಲುಗಳಿವೆ. ಆದರೆ ಆ ಸವಾಲುಗಳನ್ನು ವಿಶಾಲ ದೃಷ್ಟಿ ಕೋನದಲ್ಲಿ ಎದುರಿಸಬೇಕು.
ನಿವೃತ್ತ ಶಿಕ್ಷಕರು ಸಮಾಜದಲ್ಲಿ ಸಕ್ರೀಯ ವಾಗಿರಬೇಕು ಸೂರ್ಯನಾಗಿ ಬೆಳೆಗಳು ಆಗದಿದ್ದರೂ ಹಣತೆಯಾಗಿ ಸಮಾಜದ ಅಂಧಕಾರವನ್ನು ತೊಡೆದು ಹಾಕುವಲ್ಲಿ ಪ್ರಯತ್ನಿಸಬೇಕು. ಶಿಕ್ಷಕರು ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಅವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ನಿಸ್ವಾರ್ಥ ಸೇವೆಯೊಂದಿಗೆ ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕರಿಸಬೇಕು ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷ ಚಂದ್ರಕಲಾ ಸುರೇಶ ನಾಯಕ್ ವಹಿಸಿದ್ದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರು, ಎಸ್ ಎಸ್ ಎಲ್ ಸಿಯಲ್ಲಿ ತಾಲೂಕಿಗೆ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳು, ಸರಕಾರಿ ಶಾಲೆ ಯಲ್ಲಿ ಓದಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಎಸ್ ಎಸ್ ಎಲ್ ಸಿಯಲ್ಲಿ ಶೇಕಡಾ ನೂರು ಫಲಿತಾಂಶ ದಾಖಲಿಸಿದ ಶಾಲೆಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರವಿಕುಮಾರ್ ನಾಯ್ಕ,
ತಹಶೀಲ್ದಾರ ಸಂತೋಷ ಭಂಡಾರಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜೇಶ್ ನಾಯ್ಕ, ಕ್ಷೇತ್ರ ಸಮನ್ವಯಾಧಿಕಾರಿ ಚೇತನ್ ಕುಮಾರ್ ಅಕ್ಷರ ದಾಸೋಹದ ಉಪನಿರ್ದೇಶಕ ಭೂಮೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಆರ್ ಆರ್ ನಾಯ್ಕ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗೋಪಾಲ್ ನಾಯ್ಕ್, ಮತ್ತಿತರರು ಉಪಸ್ಥಿತರಿದ್ದರು.
ಗುಲಾಬಿ ಸಂಗಡಿಗರು ನಾಡಗೀತೆ ಹಾಡಿದರು.
ಸುನಿತಾ ಹೆಗಡೆ ರೈತಗೀತೆ ಹಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸ್ವಾಗತಿಸಿದರು.
ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು.

WhatsApp
Facebook
Telegram
error: Content is protected !!
Scroll to Top