Sunday, December 4, 2022
Homeಸಿದ್ದಾಪುರಸಿದ್ದಾಪುರದಲ್ಲಿ ಪೌರಕಾರ್ಮಿಕ ದಿನಾಚರಣೆ

ಸಿದ್ದಾಪುರದಲ್ಲಿ ಪೌರಕಾರ್ಮಿಕ ದಿನಾಚರಣೆ

ಸಿದ್ದಾಪುರ: ಪೌರಕಾರ್ಮಿಕರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಸರಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪಟ್ಟಣ ಪಂಚಾಯತ ಉಪಾಧ್ಯಕ್ಷ ರವಿಕುಮಾರ ನಾಯ್ಕ ಹೇಳಿದರು.


ಅವರು ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಪಟ್ಟಣ ಪಂಚಾಯತಿಯಲ್ಲಿ ಪೌರ ಕಾರ್ಮಿಕ ಸಿಬ್ಬಂದಿಗಳಿಗೆ ಸನ್ಮಾನಿಸಿ, ಗೌರವಧನದ ಚೆಕ್ ವಿತರಣಾ ಕಾರ್ಯಕ್ರಮ ದಲ್ಲಿ ಮಾತನಾಡಿದರು.
ಇದೇ ವೇಳೆ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಮತ್ತು ವಿವಿಧ ಸ್ಪರ್ಧೆ ಆಯೋಜಿಸಿ ಬಹುಮಾನ ವಿತರಿಸಲಾಯಿತು. ಪಟ್ಟಣ ಪಂಚಾಯತ ಅಧ್ಯಕ್ಷೆ ಚಂದ್ರಕಲಾ ನಾಯ್ಕ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.
ಸ್ಥಾಯಿ ಸಮಿತಿ ಅಧ್ಯಕ್ಷ ವಿನಯ್ ಹೊನ್ನೆಗುಂಡಿ, ಸದಸ್ಯರಾದ ಕವಿತಾ ಹೆಗಡೆ, ವೆಂಕೋಬ, ನಂದನ ಬೋರ್ಕರ, ರಾಧಿಕಾ ಕಾನಗೋಡ, ನಾಮನಿರ್ದೇಶಿತ ಸದಸ್ಯರಾದ ಸುರೇಶ ನಾಯ್ಕ, ರಾಜೇಂದ್ರ ಕಿಂದ್ರಿ, ಮಂಜುನಾಥ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಕುಮಾರ ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ಇಲಾಖೆಯ ಡಾ.ನಾಡಿಗೇರ ಆರೋಗ್ಯ ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ದೀಪಾ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ನಿರೀಕ್ಷಕಿ ಲಕ್ಷ್ಮೀ ನಾಯ್ಕ ನಿರ್ವಹಿಸಿದರು. ರಮೇಶ ಕೆ. ಎಸ್. ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!