ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯಾಧ್ಯಕ್ಷರಾದ ಹೆಚ್ ಜಿ ರಮೇಶ್ ಕುಣಿಗಲ್ ಅವರಿಗೆ ರಕ್ಷಣೆ ನೀಡಲು ಕೋರಿ ಸರಕಾರಕ್ಕೆ ಭಟ್ಕಳದಲ್ಲಿ ಮನವಿ

ಭಟ್ಕಳ ಅನ್ಯಾಯ ಅಕ್ರಮ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿರುವ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯಾಧ್ಯಕ್ಷರಾದ ಹೆಚ್ ಜಿ ರಮೇಶ್ ಇವರಿಗೆ ರಕ್ಷಣೆ ನೀಡಲು ಕೋರಿ.ಉತ್ತರ ಕನ್ನಡ ಜಿಲ್ಲಾಧಿಕಾರಿ ಮತ್ತು ಭಟ್ಕಳ ಸಹಾಯಕ ಆಯುಕ್ತರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
  
   ಸಮಾಜದಲ್ಲಿ ಹೆಚ್ಚುತ್ತಿರುವ ಕಲುಷಿತ ವಾತಾವರಣ ಅಕ್ರಮ ಅನ್ಯಾಯ ಸೇರಿದಂತೆ ಮಿತಿ ಮೀರಿರುವ ಭ್ರಷ್ಟಾಚಾರದ ಕಡಿವಾಣಕ್ಕಾಗಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಸ್ಥಾಪನೆ ಮಾಡಿ ರಾಜ್ಯದ್ಯಂತ ಸಂಘಟನೆಯನ್ನು ವಿಸ್ತರಿಸಿಕೊಂಡು ಸಂವಿಧಾನದಲ್ಲಿರುವ ಹಕ್ಕುಗಳ ಅವಕಾಶಗಳನ್ನು ಬಳಸಿಕೊಂಡು ರಾಜ್ಯದಾದ್ಯಂತ ಸಭೆ ಸಮಾರಂಭಗಳನ್ನು ಮಾಡುವ ಮೂಲಕ ಕಾನೂನು ಅರಿವು ಮೂಡಿಸುವ ಜೊತೆಗೆ ಸಮಾಜದಲ್ಲಿ ಹೆಚ್ಚುತ್ತಿರುವ ಕಲುಷಿತ ವಾತಾವರಣ ಬದಲಾವಣೆಗಾಗಿ ಅಕ್ರಮ ಅನ್ಯಾಯಗಳ ವಿರುದ್ಧ ಹಾಗೂ ಭ್ರಷ್ಟಾಚಾರದ ವಿರುದ್ಧ ಪ್ರಾಮಾಣಿಕ ಹೋರಾಟಗಳನ್ನು ನಿರಂತರವಾಗಿ ಮಾಡುತ್ತಾ ಬರುತ್ತಿರುವ ಸಂಘಟನೆಯ ರಾಜ್ಯ ಅಧ್ಯಕ್ಷರು ಆಗಿರುವ ಹೆಚ್.ಜಿ ರಮೇಶ್ ಕುಣಿಗಲ್ ಇವರು ನೇರ ನಡೆ-ನುಡಿ ಹಾಗೂ ನಿಷ್ಠುರವಾದಿಗಳಾಗಿದ್ದು ಬಹುತೇಕ ಭ್ರಷ್ಟಾಚಾರಿಗಳು ಮತ್ತು ಅಕ್ರಮ ಅನ್ಯಾಯ ಮಾಡುತ್ತಿರುವ ಸಮಾಜ ದ್ರೋಹಿಗಳ ಕೆಂಗಣ್ಣಿಗೆ ಗುರಿಯಾಗಿರುತ್ತಾರೆ. ಕರ್ನಾಟಕ ರಾಜ್ಯದಲ್ಲಿ ಅಪರೂಪದ ವ್ಯಕ್ತಿಗಳಾಗಿರುವ ಇವರು ಇಂದಿನ ವಿಷಮ ಪರಿಸ್ಥಿತಿಯಲ್ಲಿ ಶವ್ಯವಸ್ಥಿತ ಸಮಾಜ ನಿರ್ಮಾಣಕ್ಕಾಗಿ ತುಂಬಾ ಅತ್ಯವಶ್ಯಕವಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ಅವರನ್ನು ರಕ್ಷಣೆ ಮಾಡಿಕೊಳ್ಳಬೇಕಾಗಿದದ್ದು ಸಂವಿಧಾನಬದ್ಧವಾಗಿ ಸರ್ಕಾರದ ಆದ್ಯ ಕರ್ತವ್ಯವಾಗಿರುತ್ತದೆ. ಆದ್ದರಿಂದ ಅವರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಮುನ್ನೆಚ್ಚರಿಕೆಯಾಗಿ ಅವರಿಗೆ ರಕ್ಷಣೆ ನೀಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಬದಲ್ಲಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ರಾಜು ನಾಯ್ಕ ಜಿಲ್ಲಾ ಕಾರ್ಯದರ್ಶಿ ಅರ್ಜುನ್ ಮಲ್ಯ, ತಾಲೂಕ ಅಧ್ಯಕ್ಷ ನಾಗೇದ್ರ ನಾಯ್ಕ, ಉಪಾಧ್ಯಕ್ಷ ಶಂಕರ್ ನಾಯ್ಕ, ಕಾರ್ಯದರ್ಶಿ ನಾಗೇಶ ನಾಯ್ಕ ಸಹ ಕಾರ್ಯದರ್ಶಿ ವಸಂತ ದೇವಾಡಿಗ ಮುಂತಾದವರು ಉಪಸ್ಥಿತರಿದ್ದರು

WhatsApp
Facebook
Telegram
error: Content is protected !!
Scroll to Top